Mind Sharing?

ಚಿತ್ರ: ಬಡವರ ಬಂಧು (1976)
ಗಾಯಕರು: ಡಾ. ರಾಜಕುಮಾರ್
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ಎಂ. ರಂಗರಾವ್

*********************************************************************************************************************************

ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ……
ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ
ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ
ಬಿಸಿಲು ಮಳೆಗೆ ನರಳದಂತೆ ನಿನ್ನ ನೆರಳಲಿ ಸಲಹಿದೆ
ಆ ಪ್ರೀತಿಯ ಮನ ಮರೆವುದೆ
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ
ಬಳ್ಳಿಯಂತೆ ಹಬ್ಬಿ ನಿನ್ನ ಆಸರೆಯಲಿ ಬೆಳೆದೆನು
ಆಆ …….ಆಆಆ
ಆಆಆ…….ಆಆಆಆಆ
ಬಳ್ಳಿಯಂತೆ ಹಬ್ಬಿ ನಿನ್ನ ಆಸರೆಯಲಿ ಬೆಳೆದೆನು
ನನ್ನ ತಾಯಿಯ ಪಾದದಾಣೆ ಬೇರೆ ಏನನೂ ಅರಿಯೆನು
ನೀನೆ ನನ್ನ ದೇವನು
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ
ನೀನು ನಕ್ಕರೆ ನಾನು ನಗುವೆ ಅತ್ತರೇ ನಾ ಅಳುವೆನು
ನೀನು ನಕ್ಕರೆ ನಾನು ನಗುವೆ ಅತ್ತರೇ ನಾ ಅಳುವೆನು
ನಿನ್ನ ಉಸಿರಲಿ ಉಸಿರು ಬೆರೆತಿರೆ ನಿನ್ನಲೊಂದಾಗಿರುವೆನು
ನಾ ನಿನ್ನ ಕಾಣದೆ ಬದುಕೆನು
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿದೆ
ನೂರು ನೆನಪು ಮೂಡಿದೆ
Mind Sharing?