ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿಯಲ್ಲಿ ಒಬ್ಬ ವ್ಯಕ್ತಿ ವರ್ಷದಲ್ಲಿ ಎಷ್ಟು ಬಾರಿ ಅರ್ಜಿ ಹಾಕಿ ಮಾಹಿತಿ ಪಡೆಯಬಹುದು ಎಂಬುದರ ಬಗ್ಗೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಆಯೋಗವು ಕಮಾಆ 1270 ಎಪಿಎಲ್ 2017 ರಲ್ಲಿ ಕೆಲವೊಂದು ಸ್ಪಷ್ಟನೆಯನ್ನು ನೀಡಿದೆ. ಮುಂದುವರೆದು ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಕೇವಲ ವ್ಯಕ್ತಿಗಳು ಮಾಹಿತಿಯನ್ನು ಪಡೆಯಲು ಅವಕಾಶವಿರುತದೆಯೇ ಹೊರತು ಸಂಘ ಸಂಸ್ಥೆಗಳ ಹೆಸರಿನಲ್ಲಿ ಮಾಹಿತಿ ಕೇಳುವುದಕ್ಕೆ ಅವಕಾಶವಿಲ್ಲ ಎಂದು ತೀರ್ಪು ನೀಡಿದೆ. ವಿವರಗಳಿಗೆ ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿ